ಕರ್ನಾಟಕ
ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಮೀಸಲು ನಿಧಿ ದುರುಪಯೋಗ ಸಿದ್ದು ಸರ್ಕಾರ ವಿರುದ್ಧ SC/ST ಆಯೋಗದಿಂದ ಕೇಸ್ ದಾಖಲು
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ನಿಧಿಗಳನ್ನು ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಕೇಂದ್ರ SC/ST ಆಯೋಗದಿಂದ ಸುಮೋಟೊ ಕೇಸ್ ದಾಖಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ನಿಧಿಗಳನ್ನು ಬೇರೆ ಉದ್ದೇಶಕ್ಕೆ ಬಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ನಿಗಮದ 187 ಕೋಟಿ ರೂ. ನುಂಗಿದ ಸಿದ್ದರಾಮಯ್ಯ ಸರ್ಕಾರ, ದಲಿತರು ಮತ್ತು ಶೋಷಿತರ ಅಭಿವೃದ್ಧಿಗಾಗಿ ಮೀಸಲಿಟ್ಟ 14 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜೆಗಳಿಗೆ ವರ್ಗಾಯಿಸುವ ವಿರುದ್ದ ಕೇಂದ್ರ SC/ST ಆಯೋಗದಿಂದ ಸುಮೋಟೊ ಕೇಸ್ ದಾಖಲಾಗಿದೆ.
ಸುಮೋಟೊ ಕೇಸ್ ದಾಖಲಿಸಿರುವ SC/ST ಆಯೋಗ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿದೆ. 7 ದಿನಗಳ ಒಳಗಾಗಿ ಸಂಪೂರ್ಣ ವರದಿ ನೀಡುವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ. ಅಲ್ಲದೇ ಇದನ್ನು ಅತ್ಯಂತ ತುರ್ತು ಎಂದು ಪರಿಗಣಿಸಬೇಕೆಂದು ಆಯೋಗ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.
Post a comment
Log in to write reviews