
ಹಾವೇರಿ: ಹಿರೇಕೆರೂರು ತಾಲೂಕು ಸೋಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಪ್ರಾರಂಭವಾಗಿ ಒಂದು ತಿಂಗಳಾದರೂ ಕೂಡ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಂಡಿಲ್ಲ. ಮತ್ತು ಗ್ರಾಮ ಪಂಚಾಯಿತಿ ಮುನ್ನೆಚ್ಚರಿಕೆ ಕೈಗೊಂಡಿಲ್ಲ ಎಂದು ನವೀನ್ ಬಿ ಹುಲ್ಲತ್ತಿ ತಿಳಿಸಿದ್ದಾರೆ.
ಡೆಂಗ್ಯೂ ಎಂಬ ಕಾಯಿಲೆಯಿಂದ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಹಳ್ಳಿಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸುತ್ತಿದ್ದಾರೆ. ಆದರೆ ನಮ್ಮ ಗ್ರಾಮ ಪಂಚಾಯಿತಿಯವರು ಗ್ರಾಮಕ್ಕೆ ಯಾವುದೇ ರೀತಿಯ ಕ್ರಮವನ್ನು ಕೈಗೊಂಡಿಲ್ಲ. ಇದರ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳನ್ನು ಕೇಳಿದರೆ ನಮ್ಮ ಪಂಚಾಯಿತಿ ಸದಸ್ಯರಿಗೆ ಬಿಟ್ಟಿದ್ದೇವೆ, ನಮ್ಮ ಹತ್ತಿರ ಯಾವುದೇ ದುಡ್ಡು ಇಲ್ಲ ಎಂದು ಹೇಳುತ್ತಿದ್ದಾರೆ. ಪಂಚಾಯತಿಯ ಸದಸ್ಯರು ಯಾವುದೇ ರೀತಿಯ ಕ್ರಮ ಕೈಗೊಳ್ಳದ್ದಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುತ್ತದೆ ಎಂದು ನವೀನ್ ಬಿ ಹುಲ್ಲತ್ತಿ ಹೇಳಿದ್ದಾರೆ.
Poll (Public Option)

Post a comment
Log in to write reviews