
ಬೆಂಗಳೂರು: ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯ ದೇವಿನಗರದ ಬಸ್ ನಿಲ್ದಾಣದ ಬಳಿ ಬುಧವಾರ ತಡರಾತ್ರಿ ಲೈಟ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಇಎಲ್ ಮಾರ್ಗದಿಂದ ಹೆಬ್ಬಾಳದ ಕಡೆಗೆ ಬರುತ್ತಿದ್ದ ಯುವಕರ ಸ್ಕೂಟರ್ ಸುಮಾರು 1 ಗಂಟೆಗೆ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿದ್ದ ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆಬ್ಬಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಒರ್ವನ ಸೊಂಟದಲ್ಲಿ ಚಾಕು ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳ ಸಂಚಾರ ಠಾಣೆ ಪೊಲೀಸರು, ಮೃತರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews