
ಛತ್ತೀಸ್‌ಘಡ್: ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಬುಜ್ಮದ್‌ನ ಕೊಹ್ಕಮೇಟಾ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್ ಕೌಂಟರ್ನಲ್ಲಿ ಇದುವರೆಗೆ ಐವರು ನಕ್ಸಲರು ಹತರಾಗಿದ್ದಾರೆ. ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
Poll (Public Option)

Post a comment
Log in to write reviews