
ಬೆಂಗಳೂರು: ವೈಜಾಗ್‌ನಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಾಸನ ಮೂಲದ ಸೈಯ್ಯದ್ ಇಮ್ರಾನ್ ಹಾಗೂ ಕೋಲಾರದ ಶ್ರೀಕಾಂತ್ ಬಂಧಿತರು. ಆರೋಪಿಗಳಿಂದ ಒಟ್ಟು 3.12 ಲಕ್ಷ ಮೌಲ್ಯದ 51 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರಾಗಿದ್ದ ಆರೋಪಿಗಳು, ವೈಜಾಗ್‌ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯ ರಾಮ್ ದೇವ್ ಗಾರ್ಡನ್ ಹಿಂಭಾಗದ ಸಂತೆ ಮೈದಾನದಲ್ಲಿ ಗಿರಾಕಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿತರ ಪೈಕಿ ಸೈಯ್ಯದ್ ಇಮ್ರಾನ್ ವಿರುದ್ಧ ಈ ಹಿಂದೆಯೂ ಸಹ ಎನ್‌ಡಿಪಿಎಸ್ ಕಾಯ್ದೆಯಡಿ ಎರಡು ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Poll (Public Option)

Post a comment
Log in to write reviews