
ನವದೆಹಲಿ : ಕಾಂಗ್ರೆಸ್ನ ಹಿರಿಯ ಸಂಸದ ವಸಂತ್ರಾವ್ ಚವಾಣ್(Vasantrao Chavan) ನಿಧನರಾಗಿದ್ದಾರೆ.
ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ.ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ
ಆರಂಭದಲ್ಲಿ ಚವಾಣ್ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಲೋ ಬಿಪಿ ಕೂಡ ಇತ್ತು. ಚವಾಣ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಹೈದರಾಬಾದ್‌ಗೆ ಕರೆದೊಯ್ಯಲಾಯಿತು.
ಅವರು ಪ್ರತಿ ತಿಂಗಳು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು, ನಾಂದೇಡ್‌ನಲ್ಲಿ ನಡೆದ ಕಾಂಗ್ರೆಸ್ ವಿಭಾಗೀಯ ಸಭೆಯಿಂದಾಗಿ ನಿತ್ಯ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದ ಅವರ ಆರೋಗ್ಯ ತೀರ ಹದಗೆಟ್ಟಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.
Poll (Public Option)

Post a comment
Log in to write reviews