2024-09-19 04:43:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹಿರಿಯ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನಿಧನ

ನವದೆಹಲಿ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ಎಡ ಪಂಥೀಯ ನಾಯಕ ಸೀತಾರಾಮ್ ಯೆಚೂರಿರವರು ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಸೀತಾರಾಂ ಯೆಚೂರಿರವರು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ಗೆ ದಾಖಲಾಗಿದ್ದ ಸಿಪಿಐ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಉಸಿರಾಟದ ತೊಂದರೆ ಅನುಭವಿಸುತ್ತಿದ್ದರು. ಸೀತಾರಾಂ ಯೆಚೂರಿ  ರವರು ತೀವ್ರ ಉಸಿರಾಟದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು.

ತೀವ್ರ ಜ್ವರದಿಂದ ಬಳಲುತ್ತಿದ್ದು, ಜೊತೆಗೆ ನ್ಯುಮೋನಿ ಇರುವ ಕಾರಣದಿಂದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೂ ಕೂಡ ಒಳಗಾಗಿದ್ದರು.

ಮೂರು ದಶಕಗಳಿಂದ ಸಿಪಿಎಂನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ ಪಾಲಿಟ್‌ಬ್ಯುರೊ ಸದಸ್ಯರಾಗಿದ್ದ ಸೀತಾರಾಂ ಯೆಚೂರಿ ಅವರು 2005 ರಿಂದ 2017 ರವರೆಗೆ ರಾಜ್ಯಸಭಾ ಸಂಸದರಾಗಿದ್ದರು.


Post a comment

No Reviews