
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್‌ರವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದು, ಇವರಿಗೆ 87 ವರ್ಷ ವಯಸ್ಸಾಗಿತ್ತು.
ಚಿ.ದತ್ತರಾಜ್‌ರವರು ಹಲವಾರು ಸಿನಿಮಾಗಳನ್ನು ನಿರ್ದೇಶಿದ್ದರು. ಉದಾಹರಣೆಗೆ ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಕಾಮನಬಿಲ್ಲು, ಅದೇ ಕಣ್ಣು, ಶ್ರುತಿ ಸೇರಿದಾಗ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ 'ರುದ್ರಿ' ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದರು. ಚಿ.ದತ್ತರಾಜ್‌ರವರು ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಅವರ ಸಹೋದರ ಆಗಿದ್ದರು. ಹರಿಶ್ಚಂದ್ರ ಘಾಟ್ ನಲ್ಲಿ ಇಂದು ಮಧ್ಯಾಹ್ನ 1.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.
Poll (Public Option)

Post a comment
Log in to write reviews