
ಶಿವಮೊಗ್ಗ: ಹಿರಿಯ ರಾಜಕಾರಣಿ, ಕೆ.ಹೆಚ್.ಶ್ರೀನಿವಾಸ್ (85) ಅವರು ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 1939ರಲ್ಲಿ ಜನಿಸಿದ ಕೆ.ಎಚ್. ಶ್ರೀನಿವಾಸ್ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದವರು. ಇಂಗ್ಲಿಷ್ ಎಂಎ ಜೊತೆಗೆ ಕಾನೂನು ಪದವಿ ಪಡೆದಿದ್ದ ಇವರು ರಾಜಕಾರಣಿ ಮಾತ್ರವಲ್ಲದೇ ಸಾಹಿತ್ಯ, ಸಂಗೀತಕ್ಕೂ ಅಪಾರ ಕೊಡುಗೆ ನೀಡಿದ್ದಾರೆ.
ಡಿ ದೇವರಾಜ ಅರಸು ಸರ್ಕಾರದಲ್ಲಿ ಸಚಿವರಾಗಿ ಇಂಧನ, ವಾರ್ತಾ, ಯುವಜನ ಸೇವೆ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯೋಜನಾ ಖಾತೆಗಳನ್ನು ನಿರ್ವಹಿಸಿದ್ದ ಕೆ.ಎಚ್. ಶ್ರೀನಿವಾಸ್ ಅವರು ಮೂರು ಬಾರಿ ಶಾಸಕರಾಗಿ ಗೆದ್ದು, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದರು.
1967 ರಿಂದ 1971 ರ ವರೆಗೆ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಶಾಸಕರಾಗಿದ್ದರು.
Poll (Public Option)

Post a comment
Log in to write reviews