
ಬೆಳಗಾವಿ: ಮೂರು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಎರಗಿದ್ದ ಕಾಮುಕನಿಗೆ ಇದೀಗ ಗಲ್ಲುಶಿಕ್ಷೆ ಪ್ರಕಟವಾಗಿದೆ. ಬೆಳಗಾವಿಯ ಪೋಕ್ಸೋ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯ ಮೇಲೆ ಎರಗಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. 2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ ಎಂಬ ವ್ಯಕ್ತಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದನು.
ಮನೆಯ ಮುಂದೆ ಆಟವಾಡ್ತಿದ್ದ ಅಪ್ರಾಪ್ತ ಬಾಲಕಿಯನ್ನು ಚಾಕೊಲೇಟ್ ಕೊಡಿಸಿ ಆರೋಪಿ ಉದ್ದಪ್ಪ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಮಗುವಿನ ಕಣ್ಣು ಮೂಗು ಮಣ್ಣಲ್ಲಿ ಹಾಕಿ ಕೊಲೆ ಮಾಡಿದ್ದ. ಈ ಪ್ರಕರಣ ಸಂಬಂಧ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ.
sexual-assault -murder-was-sentenced-to-death
Poll (Public Option)

Post a comment
Log in to write reviews