2024-09-19 04:33:30

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ನಹದೆಹಲಿ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ.

ವಿದ್ಯಾರ್ಥಿನಿ ಚಂಪಕ್ ಮೈದಾನದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ  ಬಿದ್ದಿದಳು ಆಕೆ ತೀವ್ರವಾಗಿ ಗಾಯಗೊಂಡಿದ್ದಳು. ಜಿಲ್ಲಾ ಆಸ್ಪ್ರೆತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ., ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಲ್ಲೇ ನರ್ಸಿಂಗ್​ ವಿದ್ಯಾರ್ಥಿನಿ ಮೇಲೆ ನಡೆದ ದೌರ್ಜನ್ಯ ಆಕ್ರೋಶಕ್ಕೆ ಕಾರಣವಾಗಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ವಿದ್ಯಾರ್ಥಿನಿಗೆ ಅನೇಕ ಗಾಯಗಳಾಗಿದ್ದು, ಅತ್ಯಾಚಾರ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ರತ್ನಗಿರಿಯ ನರ್ಸಿಂಗ್ ಸಮುದಾಯದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ದಾಳಿಯಿಂದ ತೀವ್ರ ಕೋಪಗೊಂಡ ನರ್ಸ್‌ಗಳು ಮತ್ತು ಆಸ್ಪತ್ರೆ ಸಿಬ್ಬಂದಿ, ಅಪರಾಧಕ್ಕೆ ಕಾರಣರಾದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗಳು ಉಲ್ಬಣಗೊಂಡಿದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಇತರ ಬೆಂಬಲಿಗರೊಂದಿಗೆ ಬೀದಿಗಿಳಿದು ರತ್ನಗಿರಿಯ ಹಲವು ಭಾಗಗಳಲ್ಲಿ ಸಂಚಾರವನ್ನು ನಿರ್ಬಂಧಿಸಿದರು. ಪ್ರತಿಭಟನಾಕಾರರು ಬ್ಯಾನರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿ, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಪರಿಸ್ಥಿತಿಯು ನಗರದಲ್ಲಿ ಗಮನಾರ್ಹ ಅಸ್ತವ್ಯಸ್ತತೆಯನ್ನು ಸೃಷ್ಟಿಸಿದೆ, ಅಧಿಕಾರಿಗಳು ತನಿಖೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಭರವಸೆ ನೀಡಿ, ಶಾಂತಿಯಿಂದ ವರ್ತಿಸುವಂತೆ ಮನವಿ ಮಾಡಿದರು.

 

Post a comment

No Reviews