
ಬೆಂಗಳೂರು: ಮಹಿಳೆಯರಿಗೆ ಅನುಕೂಲವಾಗಲೆಂದು ಇರುವ ಶಕ್ತಿ ಯೋಜನೆಯನ್ನು ಯಾವುದೇ ಕಾಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟಪಡಿಸಿರುವ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಸರ್ಕಾರ ರಚನೆ ಮಾಡದಿದ್ದರೆ ಗ್ಯಾರಂಟಿ ಯೋಜನೆಗಳು ಅಂತ್ಯವಾಗುತ್ತವೆ ಎನ್ನುವ ಚರ್ಚೆ ಮಧ್ಯೆಯೇ ಸಚಿವರು ಈ ಸ್ಪಷ್ಟಣೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ನೀಡಿದ್ದು ಜನರ ಅನುಕೂಲಕ್ಕೆ. ಇದು ಮತ ಪಡೆಯಲು ಅಲ್ಲ. ಹೀಗಾಗಿ ಶಕ್ತಿ ಯೋಜನೆ ನಿಲ್ಲಿಸುವುದಿಲ್ಲ. ಮೋದಿ ಸರ್ಕಾರದಿಂದಾಗಿ ರಾಜ್ಯದ ಜನತೆ ಬೆಲೆ ಏರಿಕೆ ಬಿಸಿಯಲ್ಲಿ ಬೆಂದಿದ್ದರು. ಅವರನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಹೀಗಾಗಿ ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಈ ಯೋಜನೆ ಇರುತ್ತದೆ. ಈ ಕುರಿತು ಯಾರಿಗೂ ಅನುಮಾನ ಬೇಡ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Poll (Public Option)

Post a comment
Log in to write reviews