
ಬೆಂಗಳೂರು: ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಘಟನೆ ಇತಿಹಾಸದಲ್ಲಿ ನೋಡಿಲ್ಲ. ಸರ್ಕಾರಕ್ಕೆ ಗೌರವ ಇದ್ದರೆ ಇದನ್ನು ಸರಿಪಡಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ಸಚಿವನಾಗಿರುವುದನ್ನು ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ನನ್ನ ವಿರುದ್ಧ ಒಳಸಂಚು ನಡೆಸುತ್ತಿದೆ ಎಂದು ಆರೋಪ ಮಾಡಿದರು.
ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡುತ್ತಾರೆ ಎಂದರು.
ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ ಇದ್ದಾರೆ.ಅವರಿಗೆ ಹೇಳಿ, ಕುಮಾರಸ್ವಾಮಿಯದ್ದು ಏನಾದರೂ ಸಿಗುತ್ತದೆಯಾ ನೋಡಿ ಎಂದು ಕೆದಕಲು ಹೇಳಿದ್ದಾರೆ. ಅಂತಹ ಸಿಎಂ ಸಿದ್ದರಾಮಯ್ಯ ಅವರು ಈಗ ನಾಲ್ಕು ತಿಂಗಳ ನಂತರ ಯಡಿಯೂರಪ್ಪ ಅವರ ಕೇಸ್ ಕೆದಕ್ಕಿದ್ದಾರೆ. ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದಾರೆ ಎಂದರು.
Poll (Public Option)

Post a comment
Log in to write reviews