ಬಿಜೆಪಿ ಅಧಿಕಾರ ಅವಧಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರು ಏನೆಲ್ಲಾ ಮಾಡಿದ್ದಾರೆ? ಇಂಧನ ಸಚಿವರಾಗಿದ್ದ ಶೋಭಾ ಕರಂದ್ಲಾಜೆಯವರು ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ? ದಾಖಲೆ ಸಂಗ್ರಹಿಸಲು ಹೇಳಿದ್ದೇನೆ. 15 ದಿನ ಬಿಟ್ಟು ಅವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಬೈರತಿ ಸುರೇಶ್ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಾಧ್ಯಮರೊಂದಿಗೆ ಮಾತನಾಡಿದ ಅವರು, ಶೋಭಾ ಕರಂದ್ಲಾಜೆ ಅವರು ಸುಖಾ ಸುಮ್ಮನೆ ನನ್ನ ಮೇಲೆ ಆರೋಪ ಮಾಡಿದ್ದಾರೆ. ಬಿಜೆಪಿ ಅಧಿಕಾರ ಅವಧಿಯಲ್ಲಿ ಅವರು ಏನೆಲ್ಲಾ ಮಾಡಿದ್ದಾರೆ? ಇಂಧನ ಸಚಿವರಾಗಿದ್ದ ಶೋಭಾ ಕರಂದ್ಲಾಜೆಯವರು ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ? ಈ ಸಂಬಂಧ ಪೊನ್ನಣ್ಣ ಅವರಿಗೆ ಇದರ ಎಲ್ಲಾ ದಾಖಲೆ ಸಂಗ್ರಹಿಸಲು ಹೇಳಿದ್ದೇನೆ. 15 ದಿನ ಬಿಟ್ಟು ಅವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ ಹೇಳಿದರು.
Post a comment
Log in to write reviews