
ಬೆಂಗಳೂರು: ತೈಲ ಬೆಲೆ ಏರಿಕೆ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ವಾಸಿಗಳಿಗೆ ಸದ್ಯದಲ್ಲೇ ನೀರಿನ ದರ ಏರಿಕೆ ಆಗಲಿದ್ಯಾ ಎಂಬುದರ ಬಗ್ಗೆ ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಈಗಾಗಲೇ ನೀರಿನ ದರ ಏರಿಕೆ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಸ್ತಾವನೆ ಇಟ್ಟಿದೆ. 14 ವರ್ಷದಿಂದ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಆಗಿಲ್ಲ. ಈ ಹಿನ್ನಲೆ ಬೆಂಗಳೂರು ಜಲಮಂಡಳಿ ಸಿಬ್ಬಂದಿಗೆ ವೇತನ ನೀಡಲು ಸಮಸ್ಯೆ ಆಗುತ್ತಿದೆ. ನೀರಿನ ಬಳಕೆಯ ವಿದ್ಯುತ್ ವೆಚ್ಚ ಸಹ ಪಾವತಿಸಲು ಆಗುತ್ತಿಲ್ಲ. ಹೀಗಾಗಿ ನೀರಿನ ದರ ಏರಿಕೆ ಅನಿವಾರ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Poll (Public Option)

Post a comment
Log in to write reviews