
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಉಪ ನೋಂದಣಿ ಕಚೇರಿ ಬಳಿ ವಿದ್ಯುತ್ ಶಾರ್ಟ್ ಸೆರ್ಕ್ಯೂಟ್‌ನಿಂದಾಗಿ ಅಂಗಡಿ, ಮನೆಗಳಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ.
ಉಪ ನೋಂದಣಿ ಕಚೇರಿ ಬಳಿಯ ರವಿ ಜೆರಾಕ್ಸ್ ಸೆಂಟರ್‌ನಲ್ಲಿ ವಿದ್ಯುತ್ ಸ್ಪರ್ಶವಾಗಿ ಬೆಂಕಿ ಉಂಟಾಗಿದ್ದು, ಎರಡು ಅಂಗಡಿ ಹಾಗೂ ಪಕ್ಕದಲ್ಲೇ ಇದ್ದ ಒಂದು ಮನೆ, ಒಂದು ಹೋಟೆಲ್‌ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ. ವಿದ್ಯುತ್ ಅವಘಡದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನಷ್ಟವಾಗಿವೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದು, ರಾತ್ರಿಯಿಡೀ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳಿಯಾಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews