
ಮುಡಾದ ನಿವೇಶನ ಹಂಚಿಕೆಯಲ್ಲಿನ ಹಗರಣ ನಾನಾ ರೀತಿ ತಿರುವು ಪಡೆದುಕೊಂಡಿದೆ. 2020ರಿಂದ ನೀಡಲಾದ ನಿವೇಶನಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಆದೇಶದಿಂದ 50:50 ಅನುಪಾತದಲ್ಲಿ ನಿವೇಶನ ಪಡೆದವರಿಗೆ ಆತಂಕ ಶುರುವಾಗಿದೆ.
ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಮುಡಾ ಹಗರಣ ಪತಿಗೆ ಕಂಟಕವಾಗಿ ಪರಿಣಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ನಿ ಪಾರ್ವತಿಯವರು ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ವಾಪಸ್ ನೀಡಿದ್ದರು.
ಈ ಬೆನ್ನಲ್ಲೇ ಮೈಸೂರು ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ್ 2020ರಲ್ಲಿ 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಮುಡಾ ನಿವೇಶನಗಳನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಶಾಸಕ ಟಿಎಸ್ ಶ್ರೀವತ್ಸ್ ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ.
Poll (Public Option)

Post a comment
Log in to write reviews