
ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅಶೋಕ್, ಡಾ.ಜಿ.ಪರಮೇಶ್ವರ್ ರೀತಿಯಲ್ಲೇ ಡಿ.ಕೆ.ಸುರೇಶ್ ಅವರನ್ನು ಸೋಲಿಸಲಾಗಿದೆ. ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೇಳುತ್ತಾರೆ ಎಂದು ಡಿ.ಕೆ.ಸುರೇಶ್ ಸೋಲಿಸಲಾಗಿದೆ. ಈಗ ಡಿ.ಕೆ.ಶಿವಕುಮಾರ್ ಚದುರಂಗದಾಟ ಶುರು ಮಾಡಿದ್ದಾರೆ. ಹೀಗಾಗಿಯೇ ಸ್ವಾಮೀಜಿ ಬಾಯಲ್ಲಿ ಸಿಎಂ ಸ್ಥಾನದ ವಿಚಾರ ಹೇಳಿಸಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಡಿ.ಕೆ.ಶಿಯವರ ಬಲ ಕುಗ್ಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿ.ಕೆ.ಸುರೇಶ್ ಅವರ ಸೋಲಿಗೆ ಪರೋಕ್ಷವಾಗಿ ಕಾರಣವಾಗಿದ್ದಾರೆ. ಇದನ್ನು ಮನಗಂಡಿರುವ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ಸಿನಲ್ಲಿ ತಮ್ಮ ಚದುರಂಗದಾಟ ಶುರು ಮಾಡಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಸಂದರ್ಭದಲ್ಲಿ ಒಕ್ಕಲಿಗ ಶ್ರೀಗಳಾದ ಶ್ರೀ ಚಂದ್ರಶೇಖರ ಸ್ವಾಮೀಜಿಯವರಿಂದಲೇ ಸಿಎಂ ಸ್ಥಾನವನ್ನು ಡಿಕೆಶಿಯವರಿಗೆ ಒಕ್ಕಲಿಗರಿಗೆ ಬಿಟ್ಟುಕೊಡುವಂತೆ ಕೇಳಿಸಿದ್ದಾರೆ. ಇದು ಮೇಲ್ನೋಟಕ್ಕೆ, ಸ್ವಾಮೀಜಿಗಳು ಸಹಜವಾಗಿ ಕೇಳಿರುವ ಪ್ರಶ್ನೆ ಎಂದುಕೊಂಡಿದ್ದರೂ, ಇದರ ಸೂತ್ರಧಾರ ಯಾರೆಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಹೇಳಿದ್ದಾರೆ.
Poll (Public Option)

Post a comment
Log in to write reviews