
ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿಯ ಮಾಡಿದ್ದಾರೆ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲಾ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರು ಬಹಳ ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ.
ಇನ್ನೂ ಜಿಲ್ಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಮಾಧ್ಯಮರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಸ್ಥರು, ಸಂಬಂಧಿಕರ ಮೂಲಕ ಐದು ಸಾವಿರ ಕೋಟಿ ರೂ. ಆಸ್ತಿ ಬೇನಾಮಿಯಾಗಿ ಮಾಡಿದ್ದಾರೆ. ಇದೆಲ್ಲ ತನಿಖೆ ಆಗಬೇಕು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಹಿಂದೆ ಮಾಡಿದ್ದನ್ನ ಈಗ ಅನುಭವಿಸಬೇಕಾಗಿದೆ. ಮೂಡಾ ಪ್ರಕರಣದಲ್ಲಿ ಕೇವಲ ಹದಿನಾಲ್ಕು ಸೈಟು, 62 ಕೋಟಿ ವಿಚಾರ ಅಲ್ಲ. ಹಿಂದೆ ಅಡ್ವಾಣಿ ಅವರು ಯಡಿಯೂರಪ್ಪ ಹಾಗೂ ನಮ್ಮೆಲರಿಗು ರಾಜಿನಾಮೆ ಕೊಡಲು ಒಂದೇ ಮಾತು ಹೇಳಿದಾಗ ನಾವೆಲ್ಲಾ ರಾಜಿನಾಮೆ ಕೊಟ್ಟು ಸರ್ಕಾರವನ್ನೇ ವಿಸರ್ಜನೆ ಮಾಡಿದ್ದೆವು.
ಬಳ್ಳಾರಿಯಲ್ಲಿ ಹಲವು ಸ್ಟೀಲ್ ಕಂಪನಿಗಳು ಬರಬೇಕಿತ್ತು. ಆದ್ರೆ ಸಿದ್ದರಾಮಯ್ಯ ಅದಕ್ಕೆ ಕಲ್ಲು ಹಾಕಿ, ಜನರ ಉದ್ಯೋಗ ಕಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ಹಣ ಲೂಟಿ ಆಗಿದೆ. ಸಿದ್ದರಾಮಯ್ಯ ಸದನದಲ್ಲಿ 180 ಕೊಟಿ ಅಲ್ಲ 82 ಕೋಟಿ ರೂ. ಎಂದು ಒಪ್ಪಿಕೊಂಡಿದ್ದಾರೆ.. ಇಲ್ಲಿ ಕೇವಲ ನಾಗೇಂದ್ರ ಮಾತ್ರ ಅಲ್ಲ, ಇಡೀ ಸರ್ಕಾರ ಭಾಗಿಯಾಗಿದೆ ಎಂದು ಆರೋಪ ಮಾಡಿದ್ದಾರೆ.
Poll (Public Option)

Post a comment
Log in to write reviews