
ಬೆಂಗಳೂರು: ಸಿದ್ದರಾಮಯ್ಯನವರು ನಿದ್ರೆಯಲ್ಲಿ ಇದ್ದಂತಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ನಿದ್ರೆಯಲ್ಲಿ ಇದ್ದಂತಿದೆ, ಜನರ ಸಂಕಷ್ಟ ಅವರಿಗೆ ಕಾಣುತ್ತಿಲ್ಲ. ಮುಖ್ಯಮಂತ್ರಿ ಕಣ್ಣಿದ್ದೂ ಕುರುಡರಾಗಿದ್ದಾರೆ. ಕಿವಿ ಇದ್ದರೂ ಕಿವುಡರಾಗಿದ್ದಾರೆ. ಬುದ್ಧಿ ಇದ್ದರೂ ಬುದ್ಧಿ ಕಳಕೊಂಡು ಬುದ್ಧಿ ಭ್ರಮಣೆ ಆದಂತೆ ಕಾಣುತ್ತಿದೆ ಎಂದು ವಿಧಾನಪರಿಷತ್ ಎನ್.ರವಿಕುಮಾರ್ ಹೇಳಿದರು.
ಜನರು ರೊಚ್ಚಿಗೇಳುವ ಮೊದಲು, ಜನರು ರಸ್ತೆಗೆ ಇಳಿಯುವ ಮುಂಚೆ ಕೂಡಲೇ ಹಾಲು, ಡೀಸೆಲ್, ಪೆಟ್ರೋಲ್ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು ಎಂದು ಎನ್.ರವಿಕುಮಾರ್ ಆಗ್ರಹಿಸಿದರು.
ಹಾಲಿನ ಬೆಲೆ ಹೆಚ್ಚಳ ಮತ್ತೊಂದು ಬರೆ ಹಾಕುವ ಕೆಲಸ. ಹಾಲಿನ ದರ ಹೆಚ್ಚಳಕ್ಕೆ ಪ್ಯಾಕೆಟ್‌ಗೆ 50 ಎಂಎಲ್ ಹೆಚ್ಚು ಹಾಲು ಕೊಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಬೂಬು ಕೊಡುತ್ತಿದ್ದಾರೆ. ಅದಕ್ಕಾಗಿ 2 ರೂ. ಹೆಚ್ಚು ಮಾಡಿದ್ದೇವೆ ಎಂದಿದ್ದಾರೆ ಎಂದರು.
Poll (Public Option)

Post a comment
Log in to write reviews