ಟಾಪ್ 10 ನ್ಯೂಸ್
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ: ಬಿ.ವೈ ವಿಜಯೇಂದ್ರ ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶ

ಚಿತ್ರದುರ್ಗ: ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ 187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ನೂರಾರು ಬಿಜೆಪಿ ಕಾರ್ಯಕರ್ತರನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಮೇಲೇರಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ತಡೆದಾಗ ಮಾತಿನ ಚಕಮಕಿ ನಡೆದು ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಪೊಲೀಸರು ಬಿ.ವೈ.ವಿಜಯೇಂದ್ರ ಹಾಗೂ ಮುಖಂಡರನ್ನು ವಶಕ್ಕೆ ಪಡೆದು ಕರೆದೊಯ್ದರು.
Poll (Public Option)

Post a comment
Log in to write reviews