ಟಾಪ್ 10 ನ್ಯೂಸ್
ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥರ ನೆರವಿಗಾಗಿ ಸಹಾಯವಾಣಿ ಸ್ಥಾಪಿಸಿದ ಎಸ್ ಐ ಟಿ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥರ ನೆರವಿಗಾಗಿ ಎಸ್ ಐ ಟಿ ತಂಡ ಸಹಾಯವಾಣಿ ಸ್ಥಾಪಿಸಿದೆ.
ಎಸ್ ಐ. ಟಿ ತನಿಖೆ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದೆ. ಆದ್ದರಿಂದ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದೆ. ಮಾಹಿತಿ ನೀಡುವವರು 6360938947 ಈ ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಹಾಗೆಯೇ ಮಾಹಿತಿದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ತಿಳಿಸಿದ್ದಾರೆ.
Poll (Public Option)

Post a comment
Log in to write reviews