
ಶ್ರೀಲಂಕಾದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟಿ20 ಟೂರ್ನಿಯ 5ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಯುಎಇ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತದ ಪರ ನಾಯಕಿ ಹರ್ಮನ್ಪ್ರೀತ್ ಕೌರ್ 66 ರನ್, ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ 64 ರನ್. ಗಳಿಸುವುದರ ಮೂಲಕ ಹರ್ಮನ್ಪ್ರೀತ್ ಕೌರ್ ಟಿ20 ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ಬರೆದ್ದಿದ್ದಾರೆ.
ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಹರ್ಮನ್ಪ್ರೀತ್ ಕೌರ್ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಹಿಂದಿಕ್ಕಿದ್ದಾರೆ.
ಸ್ಮೃತಿ ಮಂಧಾನ ಟಿ20 ಕ್ರಿಕೆಟ್ನಲ್ಲಿ ಭಾರತದ ಪರ ಈವರೆಗೆ 138 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2765 ಎಸೆತಗಳನ್ನು ಎದುರಿಸಿರುವ ಸ್ಮೃತಿ 24 ಅರ್ಧಶತಕಗಳೊಂದಿಗೆ ಒಟ್ಟು 3378 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.
ಆದರೀಗ ಸ್ಮೃತಿ ಮಂಧಾನ ಅವರನ್ನು ಹಿಂದಿಕ್ಕಿ ಹರ್ಮನ್ಪ್ರೀತ್ ಕೌರ್ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾ ಪರ 171 ಟಿ20 ಪಂದ್ಯಗಳನ್ನಾಡಿರುವ ಹರ್ಮನ್ 1 ಶತಕ ಹಾಗೂ 12 ಅರ್ಧಶತಕಗಳೊಂದಿಗೆ ಒಟ್ಟು 3415 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಮಹಿಳಾ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.
Poll (Public Option)

Post a comment
Log in to write reviews