ಗೋಡೆ ಕುಸಿದು ಮೃತರಾದ ಕುಂಟುಬಕ್ಕೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಪರಿಹಾರ ಆಗ್ರಹ
ದಕ್ಷಿಣ ಕನ್ನಡ : ಉಳ್ಳಾಲ ತಾಲೂಕಿನ ಕುತ್ತಾರಿನ ಮದನಿ ನಗರದಲ್ಲಿ ಇಂದು ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದಾರೆ. ದುರಂತ ತಿಳಿದು ಸ್ಪೀಕರ್ ಯು.ಟಿ.ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್ ಯು.ಟಿ.ಖಾದರ್, ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂತಹ ದುರ್ಘಟನೆಗಳಲ್ಲಿ ಪರಿಹಾರ ನೀಡುವುದಕ್ಕೆ ಸರ್ಕಾರದ ಮಾನದಂಡ ಮತ್ತು ನಿಯಮಗಳಿವೆ. ಮನೆ ಕುಸಿತಕ್ಕೂ ಸರ್ಕಾರದಿಂದ ಪರಿಹಾರವಿದೆ. ಆದರೆ, ಈ ದುರಂತವನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರದ ಕಡೆಯಿಂದ ಹೆಚ್ಚಿನ ಸಹಾಯ ಮಾಡುವುದಕ್ಕೆ ಪ್ರಯತ್ನಿಸಲಾಗುವುದು. ಪರಿಹಾರ ಸೇರಿ ಎಲ್ಲಾ ವಿಚಾರಗಳ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ರಿಯಾಝ್ ಫರಂಗಿಪೇಟೆ ಬೇಟಿ ನೀಡಿ ಜಿಲ್ಲಾಡಳಿತವು ಕೂಡಲೇ ಮೃತ ಕುಟುಂಬಕ್ಕೆ ಪರಿಹಾರ ಧನವನ್ನು ಮಂಜೂರು ಮಾಡಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಸೀಗಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾಡಳಿತವು ಮುಂಗಾರು ಮಳೆಯ ಮುಂಜಾಗ್ರತಾ ಕ್ರಮವಾಗಿ ಅಪಾಯದ ಸ್ಥಿತಿಯಲ್ಲಿರುವ ಮನೆಗಳನ್ನು ಒಕ್ಕಲೆಬ್ಬಿಸಿ ಅವರಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವುದು ಅವರ ಜವಾಬ್ದಾರಿಯಾಗಿರುತ್ತದೆ. ಎರಡು ವರ್ಷಗಳ ಹಿಂದೆಯೂ ಇದೇ ಮನೆಯ ಮೇಲೆ ಕಂಪೌಂಡು ಕುಸಿದು ಬಿದ್ದು ಯಾವುದೇ ಪ್ರಾಣಪಾಯಗಳಾಗಿರಲಿಲ್ಲ. ಆದರೆ ಈಗ ಅದೇ ಮನೆಯ ಮೇಲೆ ಮತ್ತೆ ಗೋಡೆ ಕುಸಿದು 4 ಜನ ಮರಣ ಸಂಭವಿಸಿರುವುದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ ಎಂದು ಹೇಳಿದರು.
Post a comment
Log in to write reviews