
ಹುಬ್ಬಳ್ಳಿ: ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸೆಪ್ಪಂಬರ್.5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಈ ಬಾರಿ ಗೌರಿ-ಗಣೇಶ ಹಬ್ಬ ವಾರಾಂತ್ಯದಲ್ಲಿ ಬಂದಿದ್ದು ಸಾರ್ವಜನಿಕರು ಅದರಲ್ಲೂ ಪ್ರಮುಖವಾಗಿ ನೌಕರರಿಗೆ ಸಂಭ್ರಮ ಹೆಚ್ಚಿಸಿದೆ. ಸೆಪ್ಟೆಂಬರ್ 6ರಂದು ಶುಕ್ರವಾರ ಗೌರಿ ಹಬ್ಬ, ಸೆ.7ರಂದು ಶನಿವಾರ ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ.
ಹಬ್ಬದ ಆಚರಣೆಗಾಗಿ ಬೆಂಗಳೂರು,ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸೆಪ್ಟೆಂಬರ್ 5ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್‌ಗಳನ್ನು ನಿಯೋಜಿಸಲಾಗಿದೆ.
Poll (Public Option)

Post a comment
Log in to write reviews