
ಐದು ದಶಕಗಳ ಸುದೀರ್ಘ ಅವಧಿ ರಾಜಕೀಯದಲ್ಲಿ ಸಕ್ರಿಯವಾಗಿದ್ದ ವಿ.ಶ್ರೀನಿವಾಸ ಪ್ರಸಾದ್,ಕಾಂಗ್ರೆಸ್ ನಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು.
ಇವರು ಆರು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೆಯೇ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿಯೂ ಆಯ್ಕೆಯಾಗಿದ್ದರು.
ನಂತರ ಜನತಾದಳ (ಸಂಯುಕ್ತ) ಪಕ್ಷಕ್ಕೆ ಸೇರ್ಪಡೆಯಾದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಮರಳಿ 2013ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆಯಾಗಿದ್ದರು.
2013ರಿಂದ 2016ರವರೆಗೆ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಶ್ರೀನಿವಾಸ ಪ್ರಸಾದ್ ಕಂದಾಯ ಮತ್ತು ಮುಜರಾಯಿ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ, 1999ರಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಬದುಕಿನ ಬಹುಕಾಲ ಜಾತ್ಯತೀತ ತತ್ತ್ವಗಳಿಗೆ ಬದ್ಧರಾಗಿ ಜೀವನ ನಡೆಸಿದ್ದ ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆಯಿಂದಾಗಿ ನಾಡಿನ ತಳಸಮುದಾಯಗಳ ಧ್ವನಿಯೊಂದು ಕಳೆದುಹೋದಂತಾಗಿದೆ.
Tags:
Poll (Public Option)

Post a comment
Log in to write reviews