ಟಾಪ್ 10 ನ್ಯೂಸ್
ಸಿಎಂ ಬದಲಾವಣೆ ಮಾಡೋದಾದ್ರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ : ಶ್ರೀಶೈಲ ಜಗದ್ಗುರು ಆಗ್ರಹ

ಚಿಕ್ಕೋಡಿ : ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಠಿ ಮಾಡುವ ವಿಚಾರ ರಾಜ್ಯ ಕಾಂಗ್ರೆಸ್ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ನಿನ್ನೆಯಷ್ಟೇ ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನವನ್ನು ಬಿಟ್ಟು ಕೊಡುವಂತೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸಿಎಂ ಬದಲಾವಣೆ ಬಗ್ಗೆ ವೀರಶೈವ ಲಿಂಗಾಯತ ನಾಯಕರಿಗೆ ಆದ್ಯತೆ ನೀಡುವಂತೆ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾದ್ಯ ಆಗ್ರಹಿಸಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಮಾತನಾಡಿರುವ ಶ್ರೀಶೈಲ ಜಗದ್ಗುರು ಅವರು, ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಕಾಂಗ್ರೆಸ್ಗೆ ಬೆಂಬಲಿಸಿದ್ದಾರೆ. ಸಿಎಂ ಬದಲಾವಣೆ ಮಾಡೋದಾದ್ರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಆಗ್ರಹ ನೀಡಿದ್ದಾರೆ.
Poll (Public Option)

Post a comment
Log in to write reviews