2024-09-19 04:53:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

‘ಜಿಎಸ್​ಟಿ’ ಸಿನಿಮಾದಲ್ಲಿ ತಾಯಿ-ಮಗನಿಗೆ ಆ್ಯಕ್ಷನ್​ಕಟ್ ಹೇಳಿದ ಸೃಜನ್ ಲೋಕೇಶ್

 

ಸೃಜನ್ ಲೋಕೇಶ್ ಅವರು ನಟ ಹಾಗೂ ನಿರೂಪಕನಾಗಿ ಕೆಲಸ ನಿರ್ವಹಿಸಿ, ಈಗ ಅವರು ನಿರ್ದೇಶಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಜಿಎಸ್​ಟಿ’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿ, ಈ ಸಿನಿಮಾದಲ್ಲಿ ಸೃಜನ್ ಲೋಕೇಶ್ ಅವರು ಹೀರೋ ಆಗಿ ನಟಿಸಿದ್ದಾರೆ. ಸಂದೇಶ್ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ತಂಡ ಅಪ್​ಡೇಟ್ ಕೊಟ್ಟಿದೆ. ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್ ಕೆಲಸಗಳು ಶುರುವಾಗಲಿವೆ.

ಕಬಿನಿ ಬಳಿ ಸಂದೇಶ್ ನಾಗರಾಜ್ ಅವರ ರೆಸಾರ್ಟ್​ ಇದೆ. ಇಲ್ಲಿ ಸೃಜನ್ ಹಾಗೂ ನಾಯಕಿ ರಜನಿ ಭಾರದ್ವಾಜ್ ನಟಿಸಿದ ಹಾಡೊಂದರ ಚಿತ್ರೀಕರಣ ನಡೆದಿದೆ. ಅದೇ ರೀತಿ ಮೈಸೂರಿನಲ್ಲಿ ಸೃಜನ್ ಲೋಕೇಶ್, ಸಂಹಿತ ವಿನ್ಯ, ತಬಲನಾಣಿ, ಗಿರೀಶ್ ಶಿವಣ್ಣ, ವಿನೋದ್ ಗೊಬ್ಬರಗಾಲ ಮುಂತಾದವರು ಇರುವ ಹಾಡನ್ನು ಶೂಟ್ ಮಾಡಲಾಗಿದೆ.

ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಸಾಹಿತ್ಯ ಬರೆದಿದ್ದಾರೆ. ಮುರುಗಾನಂದ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ. ಹಾರಾರ್ ಕಾಮಿಡಿ ಜಾನರ್​ನಲ್ಲಿ ಸಿನಿಮಾ ಮೂಡಿಬಂದಿದ್ದು, ಸದ್ಯ ಸಿನಿಮಾಗೆ ಸಿಜಿ ಕಾರ್ಯ ನಡೆಯುತ್ತಿದೆ. ಚಿತ್ರೀಕರಣ ಪೂರ್ಣಗೊಳಿಸಿದ್ದು, ಶೀಘ್ರವೇ ಸಿನಿಮಾ ತೆರೆಮೇಲೆ ಬರಲಿದೆ.ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ನಟಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು ಅನ್ನೋದು ವಿಶೇಷ.

ಸೃಜನ್ ಲೋಕೇಶ್ ಅವರಿಗೆ ಜೊತೆಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶರತ್ ಲೋಹಿತಾಶ್ವ, ಶೋಭ್ ರಾಜ್, ಅರವಿಂದ್ ರಾವ್, ನಿವೇದಿತಾ, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣ ಈ ಸಿನಿಮಾಗೆ ಇದೆ. ರಾಜಶೇಖರ್ ಸಂಭಾಷಣೆ ಬರೆದಿದ್ದು, ತೇಜಸ್ವಿ ಕೆ. ನಾಗ್ ಈ ಚಿತ್ರಕ್ಕೆ ಸಹ ನಿರ್ದೇಶನ ಮಾಡಿದ್ದಾರೆ.

Post a comment

No Reviews