
ಬೆಂಗಳೂರು: ಎಸ್ಎಸ್ಎಲ್‌ಸಿ ಮರು ಪರೀಕ್ಷೆ ಇಂದಿನಿಂದ ಆರಂಭವಾಗಿದೆ. ಜೂನ್ 22ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಒಟ್ಟು 2,23,308 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 1,44,160 ಬಾಲಕರು ಮತ್ತು 79,148 ಬಾಲಕಿಯರಿದ್ದಾರೆ. ಒಟ್ಟು ನೋಂದಣಿಯಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ.
ರಾಜ್ಯದ 724 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಪರೀಕ್ಷೆಯನ್ನು ಸುತೂತ್ರವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಅವ್ಯವಹಾರಗಳನ್ನು ತಡೆಗಟ್ಟಲು ಸಿಸಿಟಿವಿಗಳ ಮೂಲಕ ನಿಗಾ ಇಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಅಲ್ಲದೇ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲೆ, ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Poll (Public Option)

Post a comment
Log in to write reviews