2024-12-24 06:28:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅನಧಿಕೃತ ರೆಸಾರ್ಟ್ ತೆರವು ಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ

ಚಿಕ್ಕಮಗಳೂರು :ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್​​ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್​ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.

ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್​ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್​ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್​ಒ ರಮೇಶ್ ಬಾಬು ಅವರು ನೋಟಿಸ್ ಹೊರಡಿಸಿದ್ದಾರೆ.

ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್​​​ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿಲಾಗಿದೆ, ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ​​ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿದೆ.

ಇದೀಗ, ಅನಧೀಕೃತವಾಗಿ ನಡೆಯುತ್ತಿರುವ ರೆಸಾರ್ಟ್​ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚನೆ ನೀಡಲಾಗಿದೆ.

 

Post a comment

No Reviews