
ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ಖುದ್ದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಅವಧಿಯಲ್ಲೇ ಮೊದಲ ವಿಕೆಟ್ ಪತನಕ್ಕೆ ಕ್ಷಣಗಣನೆ ಆರಂಭವಾದಂತಿದೆ.
ಪ್ರಕರಣ ಸಂಬಂಧ ಸರ್ಕಾರಕ್ಕೆ ಆಗಲಿರುವ ಮುಖಭಂಗ ತಪ್ಪಿಸಿಕೊಳ್ಳಲು ರಾಜೀನಾಮೆಗೆ ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ ಎನ್ನಲಾಗಿದೆ. ಗುರುವಾರ ತಡರಾತ್ರಿಯವರೆಗೂ ಸಿಎಂ ಹಾಗೂ ಡಿಸಿಎಂ ಮಧ್ಯೆ ಈ ಸಂಬಂಧ ಚರ್ಚೆ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವಂತೆ ಖುದ್ದು ಸಿಎಂ ಅವರು ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಒಂದೆರಡು ದಿನದಲ್ಲಿ ನಾಗೇಂದ್ರ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲೂ ಈ ರೀತಿಯ ಘಟನೆಗಳು ನಡೆದಾಗ ರಾಜೀನಾಮೆ ಪಡೆಯಲಾಗಿತ್ತು. ಆನಂತರ ತನಿಖೆ ನಡೆದು ದೋಷಮುಕ್ತರಾದ ನಂತರ ಕೆ.ಜೆ.ಜಾರ್ಜ್ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
Poll (Public Option)

Post a comment
Log in to write reviews