
ಬೆಂಗಳೂರು : ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಜು.15ರಿಂದ 26ರವರೆಗೆ ಕರೆಯಲು ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಜೂ.20ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ.
ಇನ್ನು ಲೋಕಸಭಾ ಚುನಾವಣೆ ಫಲಿತಾಂಶದ ನಂತರ ನಡೆಯುತ್ತಿರುವ ಮೊದಲ ಕಲಾಪ ಇದಾಗಿರುವುದರಿಂದ ಆಡಳಿತ ಪಕ್ಷಗಳ ಲೋಪಗಳನ್ನು ಎತ್ತಿ ಹಿಡಿದು ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಇಂಧನ, ಹಾಲಿನ ದರ ಏರಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಭಾರೀ ಜಟಾಪಟಿಗೆ ವಿಧಾನಮಂಡಲದ ಉಭಯ ಸದನಗಳು ಸಾಕ್ಷಿಯಾಗಲಿದೆ.
Poll (Public Option)

Post a comment
Log in to write reviews