2024-09-19 09:10:27

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೇರಳದ ದೇವಾಲಯದಲ್ಲಿ ಯಾಗದ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್


ಬೆಂಗಳೂರು: ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು, ಆ ದೇವಸ್ಥಾನದಲ್ಲಿ ನಡೆಯುತ್ತಿರುವುದಾಗಿ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. 
ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಕೇರಳದ ದೇವಾಲಯಗಳಲ್ಲಿ ವಾಮಾಚಾರ, ಪ್ರಾಣಿಬಲಿ ನಡೆಯುತ್ತಿಲ್ಲ ಎಂಬ ಕೇರಳ ಸಚಿವೆಯ ಹೇಳಿಕೆ ಪ್ರತಿಕ್ರಿಯಿಸಿ, ನಾನು ದೇವಾಲಯದಲ್ಲಿ ವಾಮಾಚಾರ ನಡೆಯುತ್ತಿದೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೇರಳ ದೇವರ ನಾಡು. ಅಲ್ಲಿನ ದೇವಾಲಯಗಳ ಬಗ್ಗೆ ನನಗೆ ಅಪಾರ ಗೌರವವಿದೆ. ನಾನು ಯಾರ ಭಾವನೆಗಳಿಗೂ ಧಕ್ಕೆಯಾಗುವಂತೆ ನಡೆದುಕೊಂಡಿಲ್ಲ ಎಂದರು. 
ಇತ್ತೀಚೆಗೆ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದು ನಾನು ಆ ದೇವರ ಭಕ್ತ. ಎಲ್ಲಿ ವಾಮಾಚಾರ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ನೀಡಲು ಆ ದೇವಾಲಯದ ಹೆಸರು ಬಳಸಿದೆ. ಅದರ ಆಸುಪಾಸಿನ ಖಾಸಗಿ ಜಾಗದಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಯಾರು ಈ ಯಾಗದ ಹಿಂದೆ ಇದ್ದಾರೆ ಎಂದು ಈಗ ಬಹಿರಂಗ ಪಡಿಸಲು ನಾನು ಇಚ್ಚಿಸುವುದಿಲ್ಲ. ನನಗೆ ಬಂದ ಮಾಹಿತಿ ನೀಡಿದ್ದೇನೆ. ಈ ಪ್ರಕರಣದ ಬಗ್ಗೆ ತನಿಖೆ ಮಾಡುವುದಾಗಿ ಕೇರಳದ ಸಚಿವರು ತಿಳಿಸಿದ್ದು, ಅವರ ನಿರ್ಧಾರ ಸ್ವಾಗತಿಸುತ್ತೇನೆ. ಕೇರಳದ ದೇಗುಲಗಳು, ಜನರ ಬಗ್ಗೆ ನನಗೆ ಗೌರವ, ಪ್ರೀತಿ ಇದೆ ಎಂದರು.
 

Post a comment

No Reviews