ಬೆಂಗಳೂರು: ಕಳೆದ ಮೂರು ದಿನದ ಹಿಂದೆ ಮೈಸೂರು ದಸರಾ ಆನೆಗಳಾದ ಧನಂಜಯ ಹಾಗೂ ಕಂಜನ್ ಆನೆಯ ಕಾದಾಟದ ನಂತರ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಆನೆಗಳ ಬಳಿ ಫೋಟೋ ಶೂಟ್, ರೀಲ್ಸ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಯಾವುದೇ ಕಾರಣಕ್ಕೆ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ವಿಡಿಯೋ ಮಾಡಿಕೊಂಡು ರೀಲ್ಸ್‌ಗೆ ಮುಂದಾಗುವಂತ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.
ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದನಾಡಿಗೆ ಬಂದು ಪ್ರಸ್ತುತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋ ಶೂಟ್ ಹಾಗೂ ರೀಲ್ಸ್ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳೇ ಅವಕಾಶ ನೀಡಿದ್ದಾರೆ. ಇದರಿಂದ ಆನೆಗಳು ವಿಚರಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ ಎಂದು ತಿಳಿದು ಬಂದಿದೆ.
Post a comment
Log in to write reviews