
ಆಂಧ್ರ ಪ್ರದೇಶ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಎಂಬ ಆರೋಪ ಕೇಳಿ ಬಂದಿದೆ. ಆರೋಪ ಮಧ್ಯೆಯೂ ತಿಮ್ಮಪ್ಪನ ಮಹಾ ಪ್ರಸಾದ ಲಡ್ಡುಗೆ ಮತ್ತೆ ಬೇಡಿಕೆ ಹೆಚ್ಚಿದೆ. ಲಡ್ಡು ತಯಾರಿಯಲ್ಲಿ ಅಪಚಾರ ನಡೆದಿದೆ ಎಂಬ ಆರೋಪಗಳ ನಡುವೆಯೂ ತಿಮ್ಮಪ್ಪನ ಪ್ರಸಾದವನ್ನು ಪರಮವಿತ್ರ ಎಂದೇ ಭಕ್ತರು ಪರಿಗಣಿಸಿದ್ದಾರೆ. ಇದಕ್ಕೆ ಲಡ್ಡು ಮಾರಾಟದ ಲೆಕ್ಕವೇ ಸಾಕ್ಷಿಯಾಗಿದೆ. ಸೆ. 21 ರಂದು 3.66 ಲಕ್ಷ ಲಡ್ಡುಗಳನ್ನು ಟಿಟಿಡಿ ಮಾರಾಟ ಮಾಡಿದೆ.
ಲಡ್ಡು ಅಪಚಾರ ಸಂಬಂಧ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇಂದು ಮಹಾಶಾಂತಿ ಯಾಗವನ್ನು ನೆರವೇರಿಸಿದ್ದಾರೆ. ಶುಭ ರೋಹಿಣಿ ನಕ್ಷತ್ರದಲ್ಲಿ ಮೊದಲಿಗೆ ಮಹಾಶಾಂತಿ ಹೋಮ ನಿರ್ವಹಿಸಿ ನಂತರ ವಾಸ್ತು ಹೋಮವನ್ನು ಆಗಮ ಪಂಡಿತರು ನೆರವೇರಿಸಿದ್ದಾರೆ. ಅಂತಿಮವಾಗಿ ಪಂಚಗವ್ಯಗಳಿಂದ ಸಂಪ್ರೋಕ್ಷಣೆ ಮಾಡಿದ್ದಾರೆ.
Poll (Public Option)

Post a comment
Log in to write reviews