
ಹರ್ಯಾಣ: ಹಣಕಾಸಿನ ಸಮಸ್ಯೆಯಿಂದ ನೊಂದ 19 ವರ್ಷದ ವಿದ್ಯಾರ್ಥಿಯೊಬ್ಬ ಎತ್ತರದ ನೀರಿನ ಟ್ಯಾಂಕ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ನಡೆದಿದೆ.
ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ಆತ ತನ್ನ ಹೆತ್ತವರಿಗೆ ಏಕೈಕ ಮಗ ಎನ್ನಲಾಗಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಮಾನಸಿಕ ಒತ್ತಡವನ್ನು ಅನುಭವಿಸುತ್ತಿದ್ದ ಆದರಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ
ನೀರಿನ ಟ್ಯಾಂಕ್‍ನಿಂದ ಜಿಗಿಯುವ ಮೊದಲು ವಿದ್ಯಾರ್ಥಿ ತನ್ನ ಕೈಯ ಮಣಿಕಟ್ಟನ್ನು ಕತ್ತರಿಸಲು ಪ್ರಯತ್ನಿಸಿದ ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Poll (Public Option)

Post a comment
Log in to write reviews