
ತುಮಕೂರು : ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ವರ್ಷಿಣಿ(19) ಮೃತ ವಿದ್ಯಾರ್ಥಿನಿ.
ವರ್ಷಿಣಿಗೆ ಆರೋಗ್ಯ ಸಮಸ್ಯೆ ಇದ್ದಿದ್ದದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದರು. ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಮಂಗಳವಾರ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Poll (Public Option)

Post a comment
Log in to write reviews