
ಕೋಲಾರ: ಪ್ರಥಮ ಪಿಯುಸಿ ಓದುತ್ತಿರುವ ಅಪ್ರಾಪ್ತೆಯೊಬ್ಬಳು ಖಾಸಗಿ ಕಾಲೇಜು ಕ್ಯಾಂಪಸ್‌ನ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಕೋಲಾರದಲ್ಲಿ ತಡವಾಗಿ ವರದಿಯಾಗಿದೆ.
ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯಕ್ಕೆ ತೆರಳಿದಾಗ ನರಳಾಟ ಮತ್ತು ನವಜಾತ ಶಿಶುವಿನ ಅಳು ಶಬ್ಧ ಕೇಳಿಸಿದೆ. ಕಾಲೇಜಿನ ಸಿಬ್ಬಂದಿ ಹೋಗಿ ನೋಡಿದಾಗ ಅಪ್ರಾಪ್ತೆ ಹೆರಿಗೆಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಅಪ್ರಾಪ್ತೆಯನ್ನು ಆರ್‌ಎಲ್‌ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀನಿವಾಸಪುರ ತಾಲೂಕಿನ ವಿದ್ಯಾರ್ಥಿನಿ ಹಾಗೂ ಮುಳಬಾಗಿಲು ತಾಲೂಕಿನ ಯುವಕ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಪ್ರಾಪ್ತೆಗೆ ಗರ್ಭಿಣಿಯಾಗಲು ಕಾರಣವಾದ ಯುವಕ ಸದ್ಯಕ್ಕೆ ತಲೆಮರೆಸಿಕೊಂಡಿದ್ದಾನೆ. ಕೋಲಾರ ಮಹಿಳಾ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಂಡಿರಿಉವ ಪೊಲೀಸರು ಯುಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews