
ಧಾರವಾಡ: ಶಾಲಾ ಕಾಲೇಜುಗಳು ಆರಂಭವಾಗಿ ಮೂರು ವಾರ ಕಳೆದರೂ ಧಾರವಾಡ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಶಾಲಾ ಕಾಲೇಜು ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿದ್ದರು ಕೂಡ ಸಾರಿಗೆ ಇಲಾಖೆ ಮಾತ್ರ ಬಸ್ ಪಾಸ್ ವಿತರಣೆ ಮಾಡಿಲ್ಲ. ಹೀಗಾಗಿ ವಿದ್ಯಾರ್ಥಿಗಳು ತಿಂಗಳುಗಳಿಂದ ಪಾಸ್ ವಿತರಣಾ ಕೇಂದ್ರಗಳಿಗೆ ಅಲೆದಾಡುತ್ತಿದ್ದು ದುಡ್ಡು ಕೊಟ್ಟು ಓಡಾಡುವ ಸ್ಥಿತಿ ಎದುರಿಸುತ್ತಿದ್ದಾರೆ.
Poll (Public Option)

Post a comment
Log in to write reviews