ರಾಜಕೀಯ
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ಬೆಂಗಳೂ : ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ನಾಲ್ಕು ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್ಗೆ ಕೊಂಚ ರಿಲೀಫ್ ನೀಡಿದೆ
ಈ ಮೊದಲು ಎಫ್ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ಇದನ್ನು ಚಾರ್ಜ್ಶೀಟ್ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ.
Poll (Public Option)

Post a comment
Log in to write reviews