
ನವದೆಹಲಿ : ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ.
ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ದನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ, ಚೆನಾಬ್ ಸೇತುವೆ ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. ಇನ್ನು ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಎಲ್ಲಾ ನಿರ್ಮಾಣ ಕಾರ್ಯಗಳು ಬಹುತೇಕ ಪೂರ್ಣಗೊಂಡಿವೆ. ಆದರೆ, ಸುರಂಗ ಸಂಖ್ಯೆ 1 ಮಾತ್ರ ಭಾಗಶಃ ಅಪೂರ್ಣವಾಗಿ ಉಳಿದಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Poll (Public Option)

Post a comment
Log in to write reviews