ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಆಘಾತ ಅಥವಾ ಇತರ ಅಸ್ವಾಭಾವಿಕ ಕಾರಣಗಳಿಂದ ಆನೆಗಳು ಸಾವನ್ನಪ್ಪುತ್ತಿರುವ ಕಾರಣದಿಂದ ಹೈಕೋರ್ಟ್ ಶುಕ್ರವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಆದೇಶ ಹೊರಡಿಸಿದೆ. ಅಧಿಕಾರಿಗಳ ನಿರ್ಲಕ್ಷ ಈ ಪ್ರಕರಣದಲ್ಲಿ ಎದ್ದು ಕಾಣುತ್ತದೆ ಎಂದು ಹೇಳಿದೆ.
ಕೆಲ ದಿನಗಳ ಹಿಂದಷ್ಟೇ ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದ ಅಶ್ವತ್ಥಾಮ ಎಂಬ ಆನೆ ವಿದ್ಯುತ್ ತಂತಿಯ ಸ್ಪರ್ಶದಿಂದ ಸಾವನ್ನೊಪ್ಪಿತ್ತು. ಆನೆಗಳು ಹಾಗೂ ಇತರ ವನ್ಯಜೀವಿಗಳು ಬದುಕುವ ಹಕ್ಕನ್ನು ಹೊಂದಿವೆ. ಹಾಗಾಗಿ ಈ ಸಾವುಗಳು ಅಸ್ವಾಭಾವಿಕ ಸಾವು ಎಂದು ಹೇಳಲಾಗುವುದಿಲ್ಲ. ಏಕೆಂದರೆ ಅವುಗಳಿಗೆ ಶಾಸನಬದ್ಧ ರಕ್ಷಣೆಯಿದೆ ಎಂದು ನ್ಯಾಯ ಪೀಠ ಹೇಳಿದೆ. ಹಾಗಾಗಿ ವನ್ಯಜೀವಿಗಳ ಅಸಹಜ ಸಾವಿನ ಕುರಿತು ಕರ್ನಾಟಕ ಹೈಕೋರ್ಟ್ ಪಿಐಎಲ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಆಗ್ರಹಿಸಿದೆ.
Post a comment
Log in to write reviews