2024-12-24 06:51:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸನ್ನಿ ಲಿಯೋನ್ ಬೇಡ ಅಂದ ಉಪಕುಲಪತಿ

ಕೇರಳ: ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘವು ಆಯೋಜಿಸಲು ಸಿದ್ಧತೆ ನಡೆಸಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮಕ್ಕೆ ಉಪಕುಲಪತಿ ಬ್ರೇಕ್ ಹಾಕಿದ್ದಾರೆ.
ವಿಶ್ವವಿದ್ಯಾನಿಲಯದ ಕ್ಯಾಂಪಸ್‍ನಲ್ಲಿ ಈ ಹಿಂದೆ ವಿದ್ಯಾರ್ಥಿ ಸಂಘಟನೆಗಳು ಆಯೋಜಿಸಿದ್ದ ಕೆಲವು ಕಾರ್ಯಕ್ರಮಗಳಲ್ಲಿ ಅವಘಡ ಸಂಭವಿಸಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಇದಾದ ಬಳಿಕ ಕ್ಯಾಂಪಸ್‍ನ ಹೊರಗೆ ಡಿಜೆ ಪಾರ್ಟಿಗಳು, ಸಂಗೀತ ರಾತ್ರಿ ಇತ್ಯಾದಿಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಈ ಆದೇಶದ ಹೊರತಾಗಿಯೂ, ಕೇರಳ ಇಂಜಿನಿಯರಿಂಗ್ ಕಾಲೇಜ್‍ನ ವಿದ್ಯಾರ್ಥಿ ಸಂಘವು ವಿಶ್ವವಿದ್ಯಾಲಯದ ಅನುಮತಿಯಿಲ್ಲದೆ ಸನ್ನಿ ಲಿಯೋನ್ ಅವರ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿತ್ತು. ಕಾಲೇಜಿನಲ್ಲಿ ಯಾವುದೇ ಸಂದರ್ಭದಲ್ಲೂ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಪಕುಲಪತಿ ಹೇಳಿದ್ದಾರೆ.

Post a comment

No Reviews