2024-12-24 06:15:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜುಲೈ 20 ರಂದು ನೀಟ್‌-ಯುಜಿ ಪರೀಕ್ಷೆ ಫಲಿತಾಂಶ ಪ್ರಕಟಿಸಲು NTAಗೆ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ನೀಟ್-ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಜುಲೈ 20ರಂದು ಮಧ್ಯಾಹ್ನ 12 ಗಂಟೆಯೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಎನ್‌ಟಿಎಗೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ.

ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು. ನಗರವಾರು ಮತ್ತು ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅವ್ಯವಹಾರಗಳ ಕಾರಣ ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳು ಸಲ್ಲಿಕೆಯಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

 

Post a comment

No Reviews