
ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯ ದೋಷಾರೋಪವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯವು ದೋಷಾರೋಪ ನಿಗದಿ ಮಾಡಿರುವುದರಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ಏಪ್ರಿಲ್ 8ರಂದು ನಿರಾಕರಿಸಿತ್ತು. ವಿಚಾರಣೆಯನ್ನು ಪೂರ್ಣಗೊಳಿಸಿ, ಕ್ರಿಮಿನಲ್ ಪ್ರಕರಣವನ್ನು ಸಾಧ್ಯವಾದಷ್ಟು ಮೂರು ತಿಂಗಳಿನಲ್ಲಿ ಇತ್ಯರ್ಥಪಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.
ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡರನ್ನು 2016 ರಲ್ಲಿ ಹತ್ಯೆ ಮಾಡಲಾಗಿತ್ತು. ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠವು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದಲ್ಲಿ ಮಾರ್ಪಾಡು ಮಾಡಲು ನಿರಾಕರಿಸಿತ್ತು.
Poll (Public Option)

Post a comment
Log in to write reviews