ಇಂದು ಸೂರಜ್-ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಸಹೋದರರಿಗೆ ಸಿಗುತ್ತಾ ರಿಲೀಫ್ ?

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸದ್ಯ ಜೈಲು ಪಾಲಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರರಾದ ಪ್ರಜ್ವಲ್ ಮತ್ತು ಸೂರಜ್ ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ಇಂದು (ಜುಲೈ 22) ನಡೆಯಲಿದೆ. ಇದರಿಂದ ಸಹೋದರರಿಬ್ಬರಿಗೂ ರಿಲೀಫ್ ಸಿಗುತ್ತಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಜೈಲು ಕಂಬಿ ಎಣಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ. ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
ಇತ್ತ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣ ಅವರ ಜಾಮೀನು ಆದೇಶವನ್ನೂ ಕೋರ್ಟ್ ಇಂದೇ ಪ್ರಕಟಿಸಲಿದೆ. ಸೂರಜ್ ವಿರುದ್ಧ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳಲ್ಲಿ ಜಾಮೀನು ಕೋರಿ ಸೂರಜ್ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಅರ್ಜಿಗಳ ವಿಚಾರಣೆ ನಡೆಯಲಿದೆ. ಎರಡು ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ್ದ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಹೀಗಾಗಿ ಸಹೋದರರ ಪಾಲಿಗೆ ಇಂದು ಬಿಗ್ ಡೇ ಆಗಲಿದೆ.
Poll (Public Option)

Post a comment
Log in to write reviews