
ಬೆಂಗಳೂರು: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಸೂರಜ್‌ನನ್ನು ನಗರದ ಕೋರಮಂಗಲದ 42ನೇ ಎಸಿಎಂಎಂ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿತ್ತು.
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪಿಸಿ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಜೂನ್ 22ರಂದು ರಾತ್ರಿ ಎಫ್‌ಐಆರ್ ದಾಖಲಾಗಿತ್ತು. ನಂತರ ಐದು ಕೋಟಿ ರೂ. ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಸಂತ್ರಸ್ತನ ವಿರುದ್ಧ ಸಾಕ್ಷ್ಯ ನೀಡಲು ಸೂರಜ್, ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ತೆರಳಿದ್ದಾಗ ಸುದೀರ್ಘ ವಿಚಾರಣೆ ಬಳಿಕ ಪೊಲೀಸರು ಬಂಧಿಸಿದ್ದರು.
Poll (Public Option)

Post a comment
Log in to write reviews