
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇನ್ನು ಸಿಎಂ ವಿರುದ್ಧ ಹೈಕೋರ್ಟ್ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಶುರುವಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆಯೇ ದೆಹಲಿಯಲ್ಲಿ ಕಾಂಗ್ರಸ್ ಸರಣಿ ಸಭೆ ನಡೆಸಿದ್ದಾರೆ.
ಹೈಕೋರ್ಟ್ ತೀರ್ಪು ಹೊರಬಿದ್ದ 24 ಗಂಟೆಯೊಳಗೆ ಸಭೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ. ಈ ಸೂಚನೆಯ ಬೆನ್ನಲ್ಲೇ ಸುರ್ಜೇವಾಲಾ ಅವರು ಬುಧವಾರ ಶಾಸಕಾಂಗ ಸಭೆ ನಡೆಸುವಂತೆ ರಾಜ್ಯದ ನಾಯಕರಿಗೆ ಸೂಚಿಸಿದ್ದಾರೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಉಸ್ತುವಾರಿ ಪಡೆಯಲಿದ್ದಾರೆ.
Poll (Public Option)

Post a comment
Log in to write reviews