2024-09-19 04:58:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸ್ವಾಮೀಜಿ ಹೈಕಮಾಂಡ್‌ ಅಲ್ಲ.! : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸ್ವಾಮೀಜಿ ಅವರಲ್ಲ ಎಂದು ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಕ್ಕೆ, ಸಿದ್ದರಾಮಯ್ಯ ಸಿಎಂ ಸ್ಥಾನ ತೀರ್ಮಾನ ಮಾಡಲು ಸ್ವಾಮೀಜಿ ಹೈಕಮಾಂಡ್‌ ಅಲ್ಲ ಎಂದರು.

Post a comment

No Reviews