
ನಟ ರಣದೀಪ್ ಹೂಡಾ ನಟಿಸಿ, ನಿರ್ದೇಶಿಸಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರವು ಅಧಿಕೃತವಾಗಿ 2025ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಹಿಂದೆ ಲಾಪತಾ ಲೇಡಿಸ್’ ಎಂಬ ಚಿತ್ರ ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿತ್ತು.
ಜೀವನ ಚರಿತ್ರೆಯಾಧಾರಿತ ಸಿನಿಮಾ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದೆ. ಈ ಸಿನಿಮಾದಲ್ಲಿ ರಣದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ ನಟಿಸಿದ್ದರು. ಆಮೀರ್ ಖಾನ್ ನಿರ್ಮಾಣದ ‘ಲಾಪತಾ ಲೇಡಿಸ್’ ಚಿತ್ರ ಆಸ್ಕರ್ ಆಯ್ಕೆಯಾದ ಬೆನ್ನಲ್ಲೇ ಈಗ ಈ ಸಿನಿಮಾ ಆಸ್ಕರ್ 2025ಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿದೆ. ಈ ಚಿತ್ರವು ಕಳೆದ ವರ್ಷ 2024ರಲ್ಲಿ ತೆರೆಕಂಡಿತ್ತು.
‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಆಸ್ಕರ್‌ಗೆ ಆಯ್ಕೆಯಾದ ಸಂತೋಷದ ವಿಚಾರವನ್ನು ಚಿತ್ರದ ನಿರ್ಮಾಪಕ ಸಂದೀಪ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಸಿನಿಮಾ ‘ಸ್ವಾತಂತ್ರ್ಯವೀರ್ ಸಾವರ್ಕರ್’ ಅಧಿಕೃತವಾಗಿ ಆಸ್ಕರ್‌ಗೆ ಆಯ್ಕೆಯಾಗಿದೆ. ನಿರ್ಮಾಪಕರು ಸಂತಸದ ಜೊತೆಗೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಈ ಚಿತ್ರವನ್ನು ಗುರುತಿಸಿದ ತಂಡಕ್ಕೆ ಮತ್ತು ಬೆಂಬಲಿಸಿದವರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.
Poll (Public Option)

Post a comment
Log in to write reviews